Karnataka News

*ಗುಡ್ದ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಓರ್ವ ಮಗು ರಕ್ಷಣೆ*: *ತಾಯಿ ರಕ್ಷಣೆಗಾಗಿ ಮುಂದುವರೆದ ಕಾರ್ಯಾಚರಣೆ*

ಅಜ್ಜಿ-ಮೊಮ್ಮಗು ಸಾವು

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಉಳ್ಳಾಲದಲ್ಲಿ ಮನೆ ಮೇಲೆ ಗುಡ್ದ ಕುಸಿದು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಓರ್ವ ಮಗುವನ್ನು ರಕ್ಷಿಸಲಾಗಿದ್ದು, ಮಗುವಿನ ತಾಯಿ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.

ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಗುಡ್ಡ ಕುಸಿದು ಕುಟುಂಬದ ಐದು ಜನರು ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ಕಾಂತಪ್ಪ ಪೂಜಾರಿ ಅವಶೇಷಗಳಡಿಯಿಂದ ಹೊರಬಂದು ಬಚಾವ್ ಆಗಿದ್ದರು. ಮಣ್ಣಿನಡಿ ಸಿಲುಕಿದ್ದ ಪತ್ನಿ ಪ್ರೇಮಾ ಪೂಜಾರಿ (58) ಸಾವನ್ನಪ್ಪಿದ್ದರು. ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಮೊಮ್ಮಗು ಆರ್ಯನ್ ಜೀವ ಉಳಿಸಲು ಸಾಧ್ಯವಾಗಿರಲಿಲ್ಲ. ಸೊಸೆ ಅಶ್ವಿನಿ ಹಾಗೂ ಇನ್ನೋರ್ವ ಮಗು ರಕ್ಷಣೆಗಾಗಿ ಸತತ 10 ಗಂಟೆಗಳಿಂದ ಕಾರ್ಯಾಚರಣೆ ನಡೆದಿದ್ದು, ಮಗು ಆರುಷ್ ನನ್ನು ರಕ್ಷಿಸಲಾಗಿದೆ.

ಎಸ್ ಡಿ ಆರ್ ಎಫ್ ಹಾಗೂ ಎನ್ ಡಿ ಆರ್ ಎಫ್ ಸಿಬ್ಬಂದಿ ಸುರಕ್ಷಿತವಾಗಿ ಅವಶೇಷಗಳ ಅಡಿಯಿಂದ ಮಗು ಆರುಷ್ ನನ್ನು ಹೊರತೆಗೆದಿದ್ದಾರೆ. ಆರುಷ್ ತಾಯಿ ಅಶ್ವಿನಿ ಅವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button