Karnataka News

*ಮನೆ ಮೇಲೆ ಗುಡ್ಡ ಕುಸಿತ: ಅಜ್ಜಿ, ಮೊಮ್ಮಗ ಸಾವು*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಮೇಲೆ ಗುಡ್ದ ಕುಸಿದು ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದು, ಐದು ಜನರು ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ಕಾಂತಪ್ಪ ಪೂಜಾರಿ

Home add -Advt

ಅವಶೇಷಗಳಡಿಯಿಂದ ಹೊರಬಂದು ಬಚಾವಾಗಿದ್ದಾರೆ. ಅವರ ತಾಯಿ ಪ್ರೇಮಾ ಪೂಜಾರಿ ಸಾವನ್ನಪ್ಪಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳು ಅವಶೇಷಗಳಡಿಯಲ್ಲಿ ಸಿಲುಕಿದ್ದರು. ಅವರ ರಕ್ಷಣೆಗಾಗಿ ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಯುತ್ತಿದೆ.

ಸದ್ಯದ ಮಾಹಿತಿ ಪ್ರಕಾರ ಮಣ್ಣಿನ ಅವಶೇಷಗಳಡಿ ಸಿಲುಕಿದ್ದ 6 ವರ್ಷದ ಮಗು ಆರ್ಯನ್ ಸಾವನ್ನಪ್ಪಿದ್ದಾನೆ. ಮೃತದೇಹ ಹೊರತೆಗೆಯಲಾಗಿದೆ. ಆದರೆ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ತಾಯಿ ಅಶ್ವಿನಿ ಹಾಗೂ ಮತ್ತೊಂದು ಮಗು ಆರುಷ್ ರಕ್ಷಣೆಗಾಗಿ ಎಸ್ ಡಿ ಆರ್ ಎಫ್ ತಂಡ ಹರಸಾಹಸ ಪಡುತ್ತಿದೆ. ಮಳೆಯ ನಡುವೆಯ ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗಿದೆ.


Related Articles

Back to top button