Karnataka NewsLatest

*ಪೊಲೀಸರ ವಿರುದ್ಧ ತನಿಖೆಗೆ NHRC ಆದೇಶ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಸೌಹಾರ್ದತೆ ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾತ್ರೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಆದೇಶ ನೀಡಿದೆ.

ಈ ಬಗ್ಗೆ ತನಿಖೆ ನಡೆಸಿ ಎರಡು ವಾರಗಳಲ್ಲಿ ವರದಿ ನೀಡುವಂತೆ ತನಿಖಾ ವಿಭಾಗದ ಡಿಜಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸೂಚಿಸಿದೆ.

ಪೊಲೀಸರು ರಾತ್ರೋ ರಾತ್ರಿ ಹಿಂದೂ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಗ್ಗೆ ಮಂಗಳೂರು ಉತ್ತರ ವಿಧಾನಸಭಾ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿರುವ ಮಾನವ ಹಕ್ಕುಗಳ ಆಯೋಗ ತನಿಖೆಗೆ ಆದೇಶ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button