Kannada NewsKarnataka News

*ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ: ಮನೆಯೊಳಗೆ ನದಿಯಂತೆ ನುಗ್ಗಿದ ನೀರು*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ವರುಣಾರ್ಭಟಕ್ಕೆ ಜಲಸ್ಫೋಟವಾಗಿದ್ದು, ಕಾಂಪೌಂಡ್ ಗೋಡೆ ಕುಸಿದು ಮನೆಗಳಿಗೆ ನೀರು ನುಗ್ಗಿದೆ.

ಕಂಕನಾಡಿಯ ಸುವರ್ಣ ಲೇನ್ ನಲ್ಲಿ ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಏಕಾಏಕಿ ಕುಸಿದು ಬಿದ್ದಿದ್ದು, ಕಾಂಪೌಂಡ್ ಕುಸಿದ ಹೊಡೆತಕ್ಕೆ ಮನೆಯ ಗೇಟ್ ಕಿತ್ತು ಬಂದಿದೆ. ಪ್ರವಾಹದಂತೆ ನೀರು ಮನೆಗಳಿಗೆ ನುಗ್ಗಿದೆ. ಘಯನೆಯಲ್ಲಿ ಜೋಕಿಂ ಡಿಸೋಜಾ ಕುಟುಂಬ ಅಪಾಯದಿಂದ ಪಾರಾಗಿದೆ. ಈ ದೃಶ್ಯ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button