
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕಾರು ಹಾಗೂ ತೂಫಾನ್ ವಾಹನದ ನಡಿವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಬಳಿ ಸಂಭವಿಸಿದೆ.
ಕಾರು ಬೇಲೂರಿನಿಂದ ಕುಕ್ಕು ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿತ್ತು. ಈ ವೇಳೆ ಬಿಳಿನೆಲೆ ಬಳಿ ಎದುರಿನಿಂದ ಬರುತ್ತಿದ್ದ ತೂಫಾನ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಓರ್ವ ಮಗು, ಮಹಿಳೆ ಹಾಗೂ ಇಬ್ಬರು ಪುರುಷರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರ ಗುರುತು ಪತ್ತೆಯಾಗಿಲ್ಲ. ತೂಫಾನ್ ವಾಹನದಲ್ಲಿದ್ದ ಹಲವರು ಗಾಯಗೊಂಡಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ