ಕೊರೋನಾ: ರಾಜ್ಯದಲ್ಲಿ 16 ಹೊಸ ಪ್ರಕರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ 144ಕ್ಕೇರಿದೆ. ಇಂದು ಹೊಸದಾಗಿ 16 ಪಾಸಿಟಿವ್ ವರದಿ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

Home add -Advt

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೊಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಮೂವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಇವರಲ್ಲಿ ಒಬ್ಬರು ಇತ್ತೀಚೆಗೆ ದೆಹಲಿಯಲ್ಲಿ ನಿಜಾಮುದ್ದೀನ್ ಜಮಾತ್ ನಲ್ಲಿ ನಡೆದ ಧಾರ್ಮಿಕರ ಸಭೆಯಲ್ಲಿ ಭಾಗವಹಿಸಿ ಬಂದಿದ್ದರು ಎಂದು ತಿಳಿದು ಬಂದಿದೆ.

ಇವರು ತೊಕ್ಕಟ್ಟು ಮೂಲದ ಆಟೋ ಚಾಲಕರಾಗಿದ್ದು, ಇವರನ್ನು ಕ್ವಾರಂಟೈನ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಚಾಲಕ ಇದ್ದ ವಸತಿ ಸಂಕೀರ್ಣವನ್ನು ಲಾಕ್ ಡೌನ್ ಮಾಡಲು ಉಳ್ಳಾಲ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.

Related Articles

Back to top button