*ಅದ್ಯಪಾಡಿಗೆ ಭೇಟಿ: ನೆರೆ ಹಾವಳಿ ಪರಿಶೀಲಿಸಿ, ಜನರ ಸಂಕಷ್ಟ ಆಲಿಸಿದ ಸಚಿವ ದಿನೇಶ್ ಗುಂಡೂರಾವ್*
ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಹಾವಳಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲಿಸಿದರು.
ಭಾರೀ ಮಳೆಯಿಂದಾಗಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಅವಘಡಗಳು ಸಂಭವಿಸಿದ್ದು, ಜನರು ಸಂಕಷ್ಟಕ್ಕೀಡಾಗಿದ್ದರೆ. ನೆರೆ ಹಾವಳಿ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರವ್, ಸಂತ್ರಸ್ತರ ಸಂಕಷ್ಟ ಆಲಿಸಿದರು.
ಅದ್ಯಪಾಡಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು. ಅಕ್ಕ ಪಕ್ಕದ ಗ್ರಾಮಗಳು ಜಲಾವೃತವಾಗಿರುವ ಬಗ್ಗೆ ಸಚಿವರ ಜೊತೆ ಅದ್ಯಪಾಡಿ ಸ್ಥಳೀಯ ನಿವಾಸಿಗರು ಚರ್ಚೆ ನಡೆಸಿದರು. ಪ್ರತಿ ವರ್ಷ ಅದ್ಯಪಾಡಿಯಲ್ಲಿ ಪಾಲ್ಗುಣಿ ನದಿಯ ನೆರೆ ಪ್ರವಾಹದದಿಂದ ಸ್ಥಳೀಯರು ತೊಂದರೆಗೀಡಾಗುತ್ತಾರೆ ಎಂದು ನಿವಾಸಿಗಳು ಅಳಲು ತೋಡಿಕೊಂಡರು.
ತೋಟ ಗದ್ದೆಗಳು ಮುಳುಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ.
ಅದ್ಯಪಾಡಿಯ ಅಕ್ಕ ಪಕ್ಕದ ಹಳ್ಳಿಗಳಿಗೆ ಪಲ್ಗುಣಿ ನದಿ ನೆರೆ ಹಾವಳಿ ತಡೆಯಲು, ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರಿಂದ ವರಿದಿ ಪಡೆದು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಪ್ರವಾಹ ಬಂದಿರುವ ಈ ಸಂದರ್ಭದಲ್ಲಿಯೇ ತಂತ್ರಜ್ಞರನ್ನ ಸ್ಥಳಕ್ಕೆ ಕರೆತಂದು ಸಲಹೆ ಪಡೆಯಿರಿ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ