Kannada NewsKarnataka NewsLatest

*ಅಪ್ರಾಪ್ತ ಬಾಲಕಿ ಮೇಲೆ ನಿರಂತರ 4 ವರ್ಷ ಅತ್ಯಾಚಾರ; ಮೂವರು ಆರೋಪಿಗಳು ಅರೆಸ್ಟ್*

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಘಟನೆ


ಪ್ರಗತಿವಾಹಿನಿ ಸುದ್ದಿ; ವಿಟ್ಲ:
ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ನಾಲ್ಕು ವರ್ಷಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೇಯ ಕೃತ್ಯ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದಲಿತ ಬಾಲಕಿಯ ಮೇಲೆ ಐವರು ಕಾಮುಕರು ಅತ್ಯಾಚಾರ ನಡೆಸಿದ್ದು, ಬಾಲಕಿ 12 ವರ್ಷವಿದ್ದಾಗಿನಿಂದ ಆಕೆ 16 ವರ್ಷಕ್ಕೆ ಬರುವವರೆಗೂ ನಿರಂತರ ಅತ್ಯಾಚಾರ ನಡೆದಿದ್ದು, ಕಳೆದ ತಿಂಗಳು ಈ ವಿಷಯ ಮನೆಯವರಿಗೆ ಗೊತ್ತಾಗಿದೆ.

ಕಳೆದ ತಿಂಗಳು ಬಾಲಕಿ ಹೊರಹೋದವಳು ಮನೆಗೆ ಎಷ್ಟು ಹೊತ್ತಾದರೂ ವಾಪಸ್ ಆಗದಿದ್ದಾಗ ಪೋಷಕರು ಬಾಲಕಿಯನ್ನು ಸುತ್ತಮುತ್ತಲು ಹುಡುಕಾಡಿದ್ದಾರೆ. ಈ ವೇಳೆ ಸ್ವಲ್ಪ ದೂರದಲ್ಲಿದ್ದ ಪಾಳುಮನೆಯೊಂದರಲ್ಲಿ ಬಾಲಕಿಯಿರುವುದು ಗೊತ್ತಾಗಿದೆ. ಮನೆಗೆ ಕರೆದುಕೊಂಡು ಬಂದು ಬಾಲಕಿಯನ್ನು ವಿಚಾರಿಸಿದಾಗ ನಡೆದ ಘಟನೆಗಳ ಬಗ್ಗೆ ಬಾಲಕಿ ಬಾಯ್ಬಿಟ್ಟಿದ್ದಾಳೆ.

ಕುಟುಂಬದವರು ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿದ್ದು, ಐವರು ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅತ್ಯಾಚಾರ ಪ್ರಕರಣ ಸಂಬಂಧ ಸುಕುಮಾರ್, ಕಮಲಾಕ್ಷ ಹಾಗೂ ಅಕ್ಷಯ್ ಎಂಬ ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಇಬ್ಬರ ಪತ್ತೆಗಾಗಿ ದಕ್ಷಿಣ ಕನ್ನಡ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ 4 ವರ್ಷಗಳಿಂದ ನಡೆಯುತ್ತಿದ್ದ ನಿರಂತರ ಅತ್ಯಾಚಾರ ಪ್ರಕರಣಕ್ಕೆ ಇಡೀ ದಕ್ಷಿಣ ಕನ್ನಡ ಜಿಲ್ಲೆಯೇ ಬೆಚ್ಚಿ ಬಿದ್ದಿದೆ.

Related Articles

Back to top button