Kannada NewsKarnataka NewsLatest

*ಹಾಡ ಹಗಲೇ ನಡುರಸ್ತೆಯಲ್ಲಿ ಚಾಕು ಇರಿದ ದುಷ್ಕರ್ಮಿ; ಚಿಕಿತ್ಸೆ ಫಲಿಸದೇ ಯುವತಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿದ್ದು, ಚಾಕುವಿನಿಂದ ಇರಿದು ಕೊಂದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದುಇದೆ.

18 ವರ್ಷದ ಗೌರಿ ಮರುತ ಯುವತಿ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ಈ ಘಟನೆ ನಡೆದಿದೆ.

Home add -Advt

ಮಧ್ಯಾಹ್ನ ಯುವತಿ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿ ಯುವತಿಯ ಕುತ್ತಿಗೆಗೆ ಮೂರರಿಂದ ನಾಲ್ಕು ಬಾರಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾದ ಯುವತಿ ರಕ್ತದ ಮಡುವಲ್ಲಿ ರಸ್ತೆಯಲ್ಲೇ ಬಿದ್ದಿದ್ದಾಳೆ.

ಯುವತಿಯನ್ನು ತಕ್ಷಣ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವನ್ನಪ್ಪಿದ್ದಾಳೆ. ಪುತ್ತೂರು ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

Related Articles

Back to top button