Latest
ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯತಿ ಅಭ್ಯರ್ಥಿ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಗ್ರಾಮ ಪಂಚಾಯಿತಿ ಚುನಾವಣಾ ಅಭ್ಯರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ.
ದಾಮೋದರ ಯಲಿಗಾರ (25) ಆತ್ಮಹತ್ಯೆಗೆ ಶರಣಾದ ಅಭ್ಯರ್ಥಿ. ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ತಾವು ಕಾಯಿಲೆಯಿಂದ ಬಳಲುತ್ತಿದ್ದು ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿಟ್ಟಿದ್ದಾರೆ.
ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಮೋದರ ಗರಗ ಗ್ರಾಮದ 2ನೇ ವಾರ್ಡ್ ಅಭ್ಯರ್ಥಿಯಾಗಿದ್ದರು.




