Kannada NewsKarnataka NewsPolitics
*ರಾಜೀನಾಮೆಗೆ ಮುಂದಾದ ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಅಂತಿಮ ಪಟ್ಟಿ ಪ್ರಕಟವಾಗುತ್ತಿದ್ದಂತೆ ಅಸಮಾಧಾನ ಹೆಚ್ಚಾಗಿದೆ. ಸಚಿವ ಸ್ಥಾನ ಸಿಗದ ಕಾರಣ ಕಾಂಗ್ರೆಸ್‌ನ ಹಿರಿಯ ನಾಯಕ ಮುದ್ದೇಬಿಹಾಳ ಕ್ಷೇತ್ರದ ಶಾಸಕ ಅಪ್ಪಾಜಿ ನಾಡಗೌಡ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ, ಅವರು ತಮಗೆ ನೀಡಲಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ.
ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್‌ನ ಹಿರಿಯ ನಾಯಕ ಅಪ್ಪಾಜಿ ನಾಡಗೌಡ ಅವರು ಕೂಡ ರಾಜೀನಾಮೆ ಸಲ್ಲಿಸಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಪ್ರಸ್ತುತ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರಾಗಿರುವ ಅವರು, ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆ ಎನ್ನಲಾಗಿದೆ.




