Kannada NewsKarnataka NewsLatestPolitics

*ಪ್ರಿಯಾಂಕ್ ಖರ್ಗೆ ಬಗ್ಗೆ ಮಾಜಿ ಸಚಿವ ಅಶ್ವತ್ಥನಾರಾಯಣ ಲೇವಡಿ; ಟಾಂಗ್ ನೀಡಿದ ಖರ್ಗೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆಯಲ್ಲಿ ವರ್ಗಾವಣೆ ದಂಧೆ ಮತ್ತೆ ಪ್ರತಿಧ್ವನಿಸಿದೆ. ವರ್ಗಾವಣೆ ದಂಧೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಷಯ ಪ್ರಸ್ತಾಪಿಸಿದಾಗ ಮಾಜಿ ಸಚಿವ ಅಶ್ವತ್ಥನಾರಾಯಣ ಸಚಿವ ಪ್ರಿಯಾಂಕ್ ಖರ್ಗೆ ಬಗ್ಗೆ ಲೇವಡಿ ಮಾಡಿದ್ದಾರೆ.

ವಿಧಾನಸಭೆಯಲ್ಲಿ ವರ್ಗಾವಣೆ ದಂಧೆ ವಿಚಾರವಾಗಿ ವಿಪಕ್ಷ ಹಾಗೂ ಆಡಳಿತ ಪಕ್ಷಗಳ ಸದಸ್ಯರ ನಡುವೆ ಭಾರಿ ಚರ್ಚೆ ನಡೆಯಿತು. ಈ ವೇಳೆ ಮಾಜಿ ಸಚಿವ ಅಶ್ವತ್ಥನಾರಾಯಣ, ಪ್ರಿಯಾಂಕ್ ಖರ್ಗೆ ಬಹಳ ನೈತಿಕ ಹಾಗೂ ಬಹಳ ಪ್ರಾಮಾಣಿಕ ವ್ಯಕ್ತಿ ಎಂದು ಕಾಲೆಳೆದರು.

Home add -Advt

ಇದೇ ವೇಳೆ ಗರಂ ಆದ ಪ್ರಿಯಾಂಕ್ ಖರ್ಗೆ, ಮೈಸೂರು ಸಂಸದರು ವಿಸಿ ನೇಮಕಕ್ಕೆ ಹಣ ಕೊಟ್ಟು ಬರ್ತಾರೆ. ಹಿಂದಿನ ಸರ್ಕಾರದಲ್ಲಿ ಭ್ರಷ್ಟಾಚಾರದ ಬಗ್ಗೆ ಅವರ ಸಂಸದರೇ ಹೇಳಿದ್ದಾರೆ ಎಂದು ಟಾಂಗ್ ನೀಡಿದರು.


Related Articles

Back to top button