Kannada NewsKarnataka NewsLatest

*DAR ಕಾನ್ಸ್ ಟೇಬಲ್ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಡಿಎಆರ್ ಕಾನ್ಸ್ ಟೇಬಲ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

25 ವರ್ಷದ ಪ್ರಕಾಶ್ ನಾಯ್ಕ್ ಆತ್ಮಹತ್ಯೆ ಮಾಡಿಕೊಂಡವರು. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಆನೇಕಲ್ ತಾಂಡಾ ನಿವಾಸಿಯಾಗಿದ್ದರು ಪ್ರಕಾಶ್.

Home add -Advt

ಕೇವಲ ಒಂದು ವರ್ಷದ ಹಿಂದಷ್ಟೆ ಡಿಎಆರ್ ಕಾನ್ಸ್ ಟೇಬಲ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ ಪ್ರಕಾಶ್ ನಾಯ್ಕ್ ಈಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪ್ರಕಾಶ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button