ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡೇರ್ ಡೇವಿಲ್ ಮುಸ್ತಫಾ ಸಿನಿಮಾಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆರಿಗೆ ವಿನಾಯಿತಿ ಘೋಷನೆ ಮಾಡಿದೆ.
ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣ ಕಥೆ ಆಧಾರಿತ ಚಿತ್ರ ಇದಾಗಿದ್ದು, ತೆರಿಗೆ ವಿನಾಯಿತಿ ನೀಡುವಂತೆ ನಿರ್ದೇಶಕ ಶಶಾಂಕ್ ಸೋಗಾಲ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದು, ಡೇರ್ ಡೆವಿಲ್ ಮುಸ್ತಫಾ ಸಿನಿಮಾಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡಿ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಕತೆಯಾಧಾರಿತ ಡೇರ್ ಡೆವಿಲ್ ಮುಸ್ತಫಾ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿದ್ದೇನೆ.
ಇಂದಿನ ಕಾಲಘಟ್ಟಕ್ಕೆ ಬೇಕಾಗಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ ಮೇಲೆ ಸಮಾಜ ಕಟ್ಟುವ ಮನಸುಗಳು. ಇಂಥದ್ದೊಂದು ಕಾರ್ಯಕ್ಕೆ ಕೈಹಾಕಿದ ಚಿತ್ರತಂಡಕ್ಕೆ ಅಭಿನಂದನೆಗಳು. ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ನಮ್ಮ ನಿಮ್ಮೆಲ್ಲರ ಬೆಂಬಲವಿರಲಿ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ