*ಭಾರಿ ಮಳೆಗೆ ಭೂಕುಸಿತ: 14 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಾತ್ರವಲ್ಲ ದೇದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಿಂದಾಗಿ ಅಲ್ಲೋಲಕಲ್ಲೋ ಸೃಷ್ಟಿಯಾಗಿದೆ. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ನಲ್ಲಿ ಧಾರಾಕಾರ ಮಳೆಯಿಂದಾಗಿ ಭೂಕುಸಿತವುಂಟಾಗಿದ್ದು, 14 ಜನರು ಸಾವನ್ನಪ್ಪಿದ್ದಾರೆ. ಭೂಕುಸಿತದಿಂದಾಗಿ ಹಿಮಾಲಯದ ಸಿಕ್ಕಿಂ ರಾಜ್ಯದ ಜೊತೆಗಿನ ಸಂಪರ್ಕ ಕಡಿತಗೊಂಡಿದೆ. ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ನಿನ್ನೆ ತಡರಾತ್ರಿಯಿಂದ ಸುರಿದ ಭಾರಿ ಮಳೆಯಿಂದ ಈ ದುರಂತ ಸಂಭವಿಸಿದೆ. ಉತ್ತರ ಬಂಗಾಳದ ಡಾರ್ಜಿಲಿಂಗ್ ನಲ್ಲಿ ಭೂಕುಸಿತ ಸಂಭವಿಸಿದೆ. ಮೀರಕ್, ಸುಖಿಯಾ ಪೋಖಾರಿಯಾದಂತಹ ಪ್ರದೇಶಗಳಲ್ಲಿ ಅನಾಹುತ ಸಂಭವಿಸಿದೆ. ಹಲವು ಪ್ರವಾಸಿಗರು ವಿಪತ್ತಿನಲ್ಲಿ … Continue reading *ಭಾರಿ ಮಳೆಗೆ ಭೂಕುಸಿತ: 14 ಜನರು ಸಾವು*