Film & Entertainment

*ದರ್ಶನ್ ಅರೆಸ್ಟ್ ಆಗುತ್ತಿದ್ದಂತೆ ಶಾಕ್ ಕೊಟ್ಟ ಪತ್ನಿ: ಡಿಪಿ ಡಿಲಿಟ್, ದರ್ಶನ್ ಅನ್ ಫಾಲೋ ಮಾಡಿದ ವಿಜಯಲಕ್ಷ್ಮಿ*

ಪ್ರಗತಿವಾಹಿನಿ ಸುದ್ದಿ: ರೇಣುಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ.

ಅತ್ತ ದರ್ಶನ್ ಬಂಧನವಾಗುತ್ತಿದ್ದಂತೆ ಇತ್ತ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೌನಕ್ಕೆ ಶರಣಾಗಿದ್ದು, ಘಟನೆ ಬೆನ್ನಲ್ಲೇ ಆಪ್ತರ ಬಳಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೇ ಇನ್ ಸ್ಟಾಗ್ರಾಂ ನ ಪ್ರೊಫೈಲ್ ಪಿಕ್ಚರ್ ಡಿಲಿಟ್ ಮಾಡಿದ್ದು, ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ. ಇನ್ ಸ್ಟಾ ಡಿಪಿಗೆ ಇರುವ ಫೋಟೋವನ್ನು ಡಿಲಿಟ್ ಮಾಡಿದ್ದಾರೆ.

Home add -Advt

ಹಲವು ವರ್ಷಗಳ ಬಳಿಕ ಇತ್ತೀಚೆಗೆ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅನ್ಯೋನ್ಯವಾಗಿದ್ದರು. ಮತದಾನದ ವೇಳೆ, ಕೆಲ ಪಾರ್ಟಿಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ವಿದೇಶ ಪ್ರವಾಸಕ್ಕೆ ಕೂಡ ಹೋಗಿಬಂದಿದ್ದರು. ಪವಿತ್ರಾ ಗೌಡ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಕೆಲ ಪೋಸ್ಟ್ ಗಳಿಗೆ ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡು ಕಾನೂನು ಸಮರ ಕೈಗೊಳ್ಳಬೇಕಾಗುತ್ತದೆ ಎಂದು ವಿಜಯಲಕ್ಷ್ಮಿ ಹಲವುಬಾರಿ ಎಚ್ಚರಿಕೆಯನ್ನು ಕೂಡ ನೀಡಿದ್ದರು.

ಈಗ ಪವಿತ್ರಾ ಗೌಡಗಾಗಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗುತ್ತಿದ್ದಂತೆ ಪ್ರಕರಣದ ಬೆನ್ನಲ್ಲೇ ವಿಜಯಲಕ್ಷ್ಮಿ ಡಿಪಿ ಡಿಲಿಟ್ ಮಾಡಿದ್ದು, ಇನ್ ಸ್ಟಾಗ್ರಾಂ ನಲ್ಲಿ ದರ್ಶನ್ ಅನ್ ಫಾಲೋ ಮಾಡಿದ್ದಾರೆ. ವಿಜಯಲಕ್ಷ್ಮಿ ನಡೆ ಸಾಕಷ್ಟು ಚರ್ಚೆಗೆ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.


Related Articles

Back to top button