Latest

ದರ್ಶನ್ ಹಲ್ಲೆ ಆರೋಪ ಕೇಸ್ ಗೆ ಬಿಗ್ ಟ್ವಿಸ್ಟ್; ನಾನು ದಲಿತ ಅಲ್ಲ, ಬ್ರಾಹ್ಮಣ ಎಂದ ಹೋಟೆಲ್ ಸಿಬ್ಬಂದಿ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಸಂದೇಶ್ ಹೋಟೆಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಆರೋಪ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಹಲ್ಲೆಗೊಳಗಾದ ಸಿಬ್ಬಂದಿ ಗಂಗಾಧರ್ ತಾನು ದಲಿತ ಅಲ್ಲ, ಬ್ರಾಹ್ಮಣ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಟ ದರ್ಶನ್ ರಿಂದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಮೈಸೂರು ಪೊಲೀಸರು, ಸಂದೇಶ್ ದಿ ಪ್ರಿನ್ಸ್ ಹೋಟೆಲ್ ಗೆ ಭೇಟಿ ನೀಡಿ ಗಲಾಟೆ ಬಗ್ಗೆ ಪರಿಶೀಲಿಸಿದ್ದಾರೆ. ಹಲ್ಲೆಗೊಳಗಾದ ಸಿಬ್ಬಂದಿ ಗಂಗಾಧರ್ ವಿಚಾರಣೆ ನಡೆಸಿರುವ ಪೊಲೀಸರು ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ವಿಚಾರಣೆ ವೇಳೆ ಗಂಗಾಧರ್, ತಾನು ದಲಿತ ಸಮುದಾಯದವನಲ್ಲ, ಬ್ರಾಹ್ಮಣ ಸಮುದಾಯದವನು. ದಲಿತ ಸಿಬ್ಬಂದಿ ಮೇಲೆ ಹಲ್ಲೆ ಎಂದು ಸುದ್ದಿ ಹರಡುತ್ತಿದೆ. ಆದರೆ ನಾನು ದಲಿತ ಅಲ್ಲ ಬ್ರಾಹ್ಮಣ ಸಮುದಾಯದಿಂದ ಬಂದವನು ಎಂದು ಹೇಳಿದ್ದಾರೆ ಎನ್ನಲಾಗಿದೆ.

ಚಾಲೇಂಜಿಂಗ್ ಸ್ಟಾರ್ ದರ್ಶನ್ ಸಂದೇಶ್ ಪ್ರಿನ್ಸ್ ಹೋಟೆಲ್ ನ ದಲಿತ ಸಿಬ್ಬಂದಿ ಗಂಗಾಧರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದರು.
ಮೊಬೈಲ್ ಬ್ಯಾಟರಿ ಸ್ಫೋಟ; ಛಿದ್ರಗೊಂಡ ಬಾಲಕನ ಬೆರಳುಗಳು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button