Politics

*ದರ್ಶನ್ ಪ್ರಕರಣದಲ್ಲಿ ಸಾಕ್ಷಿ ನಾಶ ಮಾಡಲು ಪ್ಲ್ಯಾನ್ ನಡೆದಂತಿದೆ; ಪ್ರಹ್ಲಾದ್ ಜೋಶಿ ಆರೋಪ*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ವಿಚಾರವಾಗಿ ಮುಖ್ಯಮಂತ್ರಿ ಮತ್ತು ರಾಜ್ಯಪಾಲರಿಗೆ ಪತ್ರ ಬರೆಯುವುದಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ನಟ ದರ್ಶನ್​ ಪ್ರಕರಣದಲ್ಲಿ ರಾಜ್ಯ ಸರ್ಕಾರ ಫೇಲ್ಯೂರ್ ಆಗಿದೆ ಎಂದು ಆರೋಪಿಸಿದರು.

ಜೈಲಿನಲ್ಲಿ ಇರುವ ಕೊಲೆ ಆರೋಪಿ ದರ್ಶನ್​​ಗೆ ರಾಜಾತಿಥ್ಯ ನೀಡುತ್ತಿರವ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವರು, ದರ್ಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀರತೆಯೇ ಇಲ್ಲವೆಂದು ಕಿಡಿ ಕಾರಿದರು.

ದರ್ಶನ್​ ಗೆ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ಈಗ ಪೊಲೀಸ್​ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಇಷ್ಟು ದಿನ ಸರ್ಕಾರ ಏನು ಕತ್ತೆ ಕಾಯುತ್ತಿತ್ತಾ? ಎಂದು ಪ್ರಶ್ನಿಸಿದ ಜೋಶಿ, ಇದರಲ್ಲಿ ಕೆಲವು ರಾಜಕಾರಣಿಗಳ ಹಸ್ತಕ್ಷೇಪವೂ ಇದೆ ಎಂದು ಆರೋಪಿಸಿದರು.

Home add -Advt

ದರ್ಶನ್ ಪ್ರಕರಣದಲ್ಲಿ ಸಾಕ್ಷಿ ನಾಶ ಮಾಡಲು ಪ್ಲ್ಯಾನ್ ಮಾಡಿದಂತಿದೆ. ಇದನ್ನೆಲ್ಲ ನೋಡಿದರೆ ಸರ್ಕಾರವೇ ದರ್ಶನ್ ರಕ್ಷಣೆಗೆ ನಿಂತಂತಿದೆ. ಅನಿಸುತ್ತದೆ. ಸರ್ಕಾರ ಏನೋ ಸಂಚು ಮಾಡುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಶಂಕೆ ವ್ಯಕ್ತಪಡಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button