
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಕೋರ್ಟ್ ಬಿಗ್ ಶಾಕ್ ನೀಡಿದೆ.
ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಕೆಲ ಸೌಲಭ್ಯವನ್ನು ಒದಗಿಸುವಂತೆ ಕೋರಿ ನಟ ದರ್ಶನ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್, ಹೆಚ್ಚುವರಿ ಹಾಸಿಗೆ, ದಿಂಬು, ಹೊದಿಕೆ ಒದಗಿಸಲು ನಿರಾಕರಿಸಿದೆ.
ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ ಕೋರ್ಟ್ ಸೂಚನೆ ನೀಡಿದೆ. ಇನ್ನು ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್ ನಿಂದ ಮುಖ್ಯ ಸೆಲ್ ಗೆ ವರ್ಗಾವಣೆ ಕೋರ್ದ ವಿಚಾರವಾಗಿ ಜೈಲಧಿಕಾರಿಗಳಿಗೆ ಈ ಬಗ್ಗೆ ತೀರ್ಮಾನಿಸಲು ಸೂಚಿಸಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಶೀಘ್ರ ವಿಚಾರಣೆ ಕೋರಿದ ಎಸ್ ಪಿಪಿ ಅರ್ಜಿಯನ್ನು ಕೋರ್ಟ್ ಮಾನ್ಯ ಮಾಡಿದ್ದು, ಅಕ್ಟೋಬರ್.31ಕ್ಕೆ ದೋಷಾರೋಪ ನಿಗದಿಗೆ ಕೋರ್ಟ್ ಸೂಚನೆ ನೀಡಿದೆ.




