Film & Entertainment

*ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಶಾಕ್; ಜೈಲುವಾಸವೇ ಗತಿ*

ಪ್ರಗತಿವಾಹಿನಿ ಸುದ್ದಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಹಿನ್ನಡೆಯಾಗಿದ್ದು, ಮತ್ತೆ ಜೈಲುವಾಸವೇ ಗತಿಯಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೀಡಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಯಿತು.

ಈ ವೇಳೆ ವಿಚಾರಣೆ ನಡೆಸಿದ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್, ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ 14 ದಿನಗಳ ಕಾಲ ಅಂದರೆ ಆಗಸ್ಟ್ 1ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.

Home add -Advt

ನಟ ದರ್ಶನ್,ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

Related Articles

Back to top button