Film & EntertainmentKannada NewsKarnataka NewsLatest

*ಜೈಲಿನಲ್ಲೇ ದರ್ಶನ್‌ಗೆ ವಿಶೇಷ ಚಿಕಿತ್ಸೆ*: *ಬೆನ್ನುನೋವಿಗೆ ವೈದ್ಯರು ಮಾಡಿದ್ದೇನು ಗೊತ್ತಾ?*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಇದೀಗ ಕಾರಾಗೃಹದಲ್ಲೇ ವೈದ್ಯಕೀಯ ಚಿಕಿತ್ಸೆ ಮುಂದುವರಿದಿದೆ. ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ಅವರಿಗೆ ಫಿಸಿಯೋಥೆರಪಿ ಆರಂಭಿಸಲಾಗಿದೆ. ನ್ಯಾಯಾಲಯದ ಸೂಚನೆಯಂತೆ ವೈದ್ಯರ ತಂಡ ಜೈಲಿಗೆ ಭೇಟಿ ನೀಡಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ದರ್ಶನ್‌ಗೆ ಚಿಕಿತ್ಸೆ ನೀಡುವಂತೆ ನ್ಯಾಯಾಲಯ ನಿರ್ದೇಶನ ನೀಡಿತ್ತು. ಅದರಂತೆ ಜೈಲಾಧಿಕಾರಿಗಳು ವೈದ್ಯರಿಗೆ ಮನವಿ ಸಲ್ಲಿಸಿದ್ದು, ಸಂಜಯ್ ಗಾಂಧಿ ಆಸ್ಪತ್ರೆಯ ಫಿಸಿಯೋಥೆರಪಿ ತಜ್ಞರ ತಂಡ ಕಾರಾಗೃಹಕ್ಕೆ ಭೇಟಿ ನೀಡಿ ಚಿಕಿತ್ಸೆ ಆರಂಭಿಸಿದೆ.

ದರ್ಶನ್ ಅವರ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿ ಎರಡು ಅಥವಾ ಮೂರು ದಿನಗಳಿಗೊಮ್ಮೆ ಫಿಸಿಯೋಥೆರಪಿ ನೀಡಲು ವ್ಯವಸ್ಥೆ ಮಾಡಲಾಗಿದೆ. ಮೊದಲ ದಿನ ಜೈಲಿನ ಬ್ಯಾರಕ್‌ನಲ್ಲಿಯೇ ವೈದ್ಯರು ಸುಮಾರು ಒಂದೂವರೆ ಗಂಟೆಗಳ ಕಾಲ ಚಿಕಿತ್ಸೆ ನೀಡಿದ್ದಾರೆ.

ಈ ಹಿಂದೆಯೂ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯರು ದರ್ಶನ್‌ಗೆ ಹಂತ ಹಂತವಾಗಿ ಫಿಸಿಯೋಥೆರಪಿ ನೀಡಿದ್ದರು. ಆ ಚಿಕಿತ್ಸೆಯಿಂದ ಬೆನ್ನುನೋವಿನ ಸಮಸ್ಯೆ ಗಣನೀಯವಾಗಿ ಕಡಿಮೆಯಾಗಿತ್ತು ಎಂದು ತಿಳಿದುಬಂದಿದೆ.

ನ್ಯಾಯಾಲಯದ ಆದೇಶದಂತೆ ಜೈಲಿನಲ್ಲಿಯೇ ಚಿಕಿತ್ಸೆ ಮುಂದುವರಿಯುತ್ತಿದ್ದು, ವೈದ್ಯಕೀಯ ತಂಡಕ್ಕೆ ಅಗತ್ಯ ಸೌಲಭ್ಯಗಳನ್ನು ಜೈಲಾಧಿಕಾರಿಗಳು ಒದಗಿಸಿದ್ದಾರೆ. ಇದೀಗ ಈ ಚಿಕಿತ್ಸೆಯಿಂದ ದರ್ಶನ್ ಅವರ ಬೆನ್ನುನೋವು ಎಷ್ಟರಮಟ್ಟಿಗೆ ಕಡಿಮೆಯಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

Related Articles

Back to top button