Film & EntertainmentLatest
*ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ.
ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಹೈಕೋರ್ಟ್ ನೀಡಿರುವ ಜಾಮೀನು ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಎರಡೂ ಕಡೆಯ ವಕೀಲರ ವಾದ-ಪ್ರತಿ ವಾದ ಆಲಿಸಿದೆ. ಪ್ರಕರಣದ ತೀರ್ಪನ್ನು ಕಾಯ್ದಿರಿಸಿರುವ ಸುಪ್ರೀಂ ಕೋರ್ಟ್ 10 ದಿನಗಳ ಬಳಿಕ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದೆ.