Kannada NewsKarnataka NewsLatest

*ದರ್ಶನ್ ಪುತ್ರ ವಿನೀಶ್ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಬೆಂಗಳೂರಿನ ಆರ್.ಆರ್. ನಗರದ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ವೇಳೆ ಸ್ಥಳದಲ್ಲಿ ಕೆಲಕಾಲ ಗಲಾಟೆ ನಡೆದು ಸ್ಥಳೀಯರು ಹಾಗೂ ವಿನೀಶ್ ನಡುವೆ ವಾಗ್ವಾದ ನಡೆದಿದೆ.

ಅಪಘಾತದ ವೇಳೆ ವಿನೀಶ್ ಕಾರು ಓಡಿಸುತ್ತಿರಲಿಲ್ಲ. ಅವರು ಪಕ್ಕದ ಸೀಟ್ ನಲ್ಲಿ ಕುಳಿತಿದ್ದರು. ಚಾಲಕ ಕಾರು ಓಡಿಸುತ್ತಿದ್ದ ಎಂದು ತಿಳಿದುಬಂದಿದೆ. ವಿನೀಶ್ ಗೆ ಯಾವುದೇ ಗಾಯಳಾಗಿಲ್ಲ. ಆದರೆ ಸಾಅಮಜಿಕ ಜಾಲತಾಣಗಳಲ್ಲಿ ವಿನೀಶ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾಗಿ ವದಂತಿ ಹಬ್ಬುತ್ತಿದೆ. ಅಪಘಾತದ ಬಗ್ಗೆ ವಿನೀಶ್ ತಾಯಿ ವಿಜಯಲಕ್ಷ್ಮೀ ದರ್ಶನ್ ಸ್ಪಷ್ಟನೆ ನೀಡಿದ್ದಾರೆ.

ವಿನೀಶ್‌ಗೆ ದೊಡ್ಡ ಅಪಘಾತವಾಗಿದೆ ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹರಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳು. ವಿನೀಶ್ ಸುರಕ್ಷಿತವಾಗಿದ್ದಾನೆ ಮತ್ತು ಆರಾಮಾಗಿದ್ದಾನೆ. ಎಂದಿನಂತೆ ನಮ್ಮ ಚಾಲಕನೇ ಕಾರನ್ನು ಚಲಾಯಿಸುತ್ತಿದ್ದನು. ವಿನೀಶ್ ವಾಹನ ಚಲಾಯಿಸುತ್ತಿರಲಿಲ್ಲ. ಬೆಂಗಳೂರಿನ ಟ್ರಾಫಿಕ್‌ನಲ್ಲಿ ಸಾಮಾನ್ಯ ಎನ್ನುವಂತಹ ಒಂದು ಸಣ್ಣ ರಸ್ತೆ ಅಪಘಾತ ಸಂಭವಿಸಿದೆ ಅಷ್ಟೆ. ಎದುರಿಗಿದ್ದ ಬೈಕ್ ಸವಾರರು ಕೂಡ ತಮ್ಮದೇ ತಪ್ಪು ಎಂದು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬೈಕ್‌ನಲ್ಲಿದ್ದವರು ಸುರಕ್ಷಿತವಾಗಿದ್ದಾರೆಯೇ ಎಂದು ನೋಡಲು ವಿನೀಶ್ ಕಾರಿನಿಂದ ಕೆಳಗಿಳಿದಿದ್ದನು. ಆದರೆ ಆ ಕೆಲವು ಕ್ಷಣಗಳ ದೃಶ್ಯಗಳನ್ನು ಸಂದರ್ಭಕ್ಕೆ ತಕ್ಕುದಲ್ಲದ ರೀತಿಯಲ್ಲಿ ಮತ್ತು ತಪ್ಪು ದಾರಿಗೆಳೆಯುವಂತೆ ಬಿಂಬಿಸಲಾಗಿದೆ. ಯಾರು ಕೂಡ ಇಂತಹ ಸುಳ್ಳು ವರದಿಗಳನ್ನು ನಂಬಬೇಡಿ ಮತ್ತು ಶೇರ್ ಮಾಡಬೇಡಿ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button