Film & EntertainmentKannada NewsKarnataka NewsNationalPolitics

*ಪತ್ನಿ ಹಾಗೂ ಮಗನ ಭೇಟಿಗೆ ಅವಕಾಶ ನೀಡಿ: ಜೈಲು ಅಧಿಕಾರಿಗೆ ಪತ್ರ ಬರೆದೆ ದರ್ಶನ*

ಪ್ರಗತಿವಾಹಿನಿ ಸುದ್ದಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು, ಜೈಲಿನ ಎಸ್‌ಪಿಗೆ ವಿಶೇಷ ಪತ್ರ ಬರೆದು ತಮ್ಮ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಅವರನ್ನು ಜೈಲಿನ ಒಳಗಡೆ ಭೇಟಿ ಮಾಡಲು ವಿಶೇಷ ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿದ್ದಾರೆ

ಜೈಲಿನ ನಿಯಮಾವಳಿಗಳ ಪ್ರಕಾರ ಸಾಮಾನ್ಯ ಸಂದರ್ಶನದ ಅವಧಿಯಲ್ಲಿ ಭೇಟಿಯಾಗುವ ಬದಲು, ಜೈಲಿನ ಒಳಗಿರುವ ಪ್ರತ್ಯೇಕ ಕೊಠಡಿಯಲ್ಲಿ ಪತ್ನಿ ಮತ್ತು ಮಗನನ್ನು ಮುಖಾಮುಖಿಯಾಗಿ ಭೇಟಿ ಮಾಡಲು ದರ್ಶನ್ ಅನುಮತಿ ಕೋರಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮೇ 16 ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

Home add -Advt

ದರ್ಶನ್ ಅವರ ಈ ವಿಶೇಷ ಮನವಿಗೆ ಜೈಲು ಆಡಳಿತ ಮಂಡಳಿ ಇನ್ನು ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಕೈದಿಗಳ ಭೇಟಿಗೆ ಸಂಬಂಧಿಸಿದಂತೆ ಜೈಲಿನ ನಿಯಮಾವಳಿಗಳು ಕಟ್ಟುನಿಟ್ಟಾಗಿದ್ದು, ಕೊಠಡಿಯ ಒಳಗೆ ಪ್ರತ್ಯೇಕ ಭೇಟಿಗೆ ಅವಕಾಶ ನೀಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಕಾರಾಗೃಹದ ಹಿರಿಯ ಅಧಿಕಾರಿಗಳು ಇಂದು ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಅವರ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ನಟ ದರ್ಶನ ಅವರು ಪತ್ರ ಬರೆದಿದ್ದಾರೆ. ಕಾನೂನು ಹೋರಾಟದಲ್ಲಿ ಭಾರಿ ಹಿನ್ನಡೆಯಾದ ಹಿನ್ನೆಲೆಯಲ್ಲಿ ಕುಟುಂಬದವರನ್ನು ಖುದ್ದಾಗಿ ಭೇಟಿಯಾಗಿ, ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚಿಸಲು ದರ್ಶನ್ ಬಯಸಿದ್ದಾರೆ ಎನ್ನಲಾಗಿದೆ.

Related Articles

Back to top button