
ಪ್ರಗತಿವಾಹಿನಿ ಸುದ್ದಿ: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರು ಪೊಲೀಸರು ಬಂದಿಸಿದ್ದಾರೆ. ಕೊಲೆ ಕೇಸ್ ನಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ.
ರೇಣುಕಾ ಸ್ವಾಮಿ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಮೈಸೂರಿನ ಫಾರ್ಮ್ ಹೌಸ್ ನಲ್ಲಿದ್ದ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್, ಫೋಟೋಗಳನ್ನು ಕಳುಹಿಸಿದ್ದ ಎಂಬ ಆರೋಪ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನನ್ನು ಕಿಡ್ನ್ಯಾಪ್ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ನಿನ್ನೆ ಮೂವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು. ಇದೀಗ ಇದೇ ಪ್ರಕರಣದ ನಟ ದರ್ಶನ್ ಸೇರಿದಂತೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ