Film & Entertainment

*ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ಮತ್ತೆ ಶಾಕ್*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಮತ್ತೆ ಜೈಲುವಾಸವೇ ಗತಿಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್, ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಬೆಂಗಳೂರಿನ ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ಹಿಂದಿನ ವಿಚಾರಣೆ ವೇಳೆ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಇದೀಗ ಮತ್ತೆ ಮುಂದೂಡಲಾಗಿದೆ.

ಸೆ.30ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ಮತ್ತೆ ನಿರಾಸೆಯಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button