![](https://pragativahini.com/wp-content/uploads/2025/02/darshan-.jpg)
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲು ಸೇರಿ ಜಾಮೀನು ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್, ಇದೇ ಮೊದಲ ಬಾರಿಗೆ ಕ್ಯಾಮರಾ ಮುಂದೆ ಮಾತನಾಡಿದ್ದು, ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಈ ಬಾರಿ ನಾನು ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ದರ್ಶನ್ ನಿರಾಸೆ ಮೂಡಿಸಿದ್ದಾರೆ. ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಎಂದಿದ್ದಾರೆ.
ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳೋದಾ? ಧನ್ಯವಾದ ಹೇಳೋದಾ? ನೀವೆಲ್ಲರೂ ಕೊಟ್ಟಿರುವ ಪ್ರೀತಿಗೆ ಏನು ಹೇಳಿದರೂ ಕಮ್ಮಿನೇ. ಅದನ್ನು ಹೇಗೆ ಹಿಂದಿರುಗಿಸಿ ಕೊಡುವುದು ನನಗೆ ಗೊತ್ತಾಗ್ತಿಲ್ಲ. ಆದರೆ ಇದೇ ಫೆ.16ರಂದು ನನ್ನ ಹುಟ್ಟುಹಬ್ಬದ ದಿನದಂದು ಪ್ರತಿಯೊಬ್ಬರನ್ನು ಭೇಟಿಯಾಗಿ ಥ್ಯಾಂಕ್ಸ್ ಹೇಳುವ ಆಸೆಯಿತ್ತು. ಆದರೆ ನನ್ನ ಆರೋಗ್ಯ ಸಮಸ್ಯೆಯಿಂದ ತುಂಬಾ ಹೊತ್ತು ನಿಂತುಕೊಳ್ಳೋಕೆ ಆಗಲ್ಲ. ಹೀಗಾಗಿ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
ಇದೊಂದು ಸಾರಿ ಕ್ಷಮಿಸಿ ಎಂದು ಪರಿ ಪರಿಯಾಗಿ ಕೇಳಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ