Karnataka News

*ಕೊಲೆ ಆರೋಪಿ ನಟ ದರ್ಶನ್ ಕೋರ್ಟ್ ಗೆ ಹಾಜರು*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಇಂದು ಕೋರ್ಟ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರಿನ 52ನೇ ಸಿಸಿಹೆಚ್ ಕೋರ್ಟ್ ಗೆ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳು ಹಾಜರಾಗಿದ್ದು, ವಿಚಾರಣೆ ಎದುರಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ನಟ ದರ್ಶನ್ ಎ2 ಆರೋಪಿಗಳಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಗ್ಯಾಂಗ್ ಜಾಮೀನಿನ ಮೇಲೆ ಬಿಡಿಗಡೆಯಾಗಿ ಹೊರಬಂದಿತ್ತು. ಪ್ರಕರನದ ವಿಚಾರಣೆ ಕೋರ್ಟ್ ನಲ್ಲಿದ್ದು, ಇದೀಗ ವಿಚಾರಣೆಗೆ ಕೋರ್ಟ್ ಗೆ ಹಾಜರಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button