ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್

ಪ್ರಗತಿವಾಹಿನಿ ಸುದ್ದಿ; ಮೈಸೂರು: ಅನಾರೋಗ್ಯದ ಕಾರಣ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್ ಆರೋಗ್ಯ ಕುರಿತು ಆಸ್ಪತ್ರೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.

ಹೊಟ್ಟೆ ನೋವಿನ ಹಿನ್ನೆಲೆಯಲ್ಲಿ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ಯಾಸ್ಟ್ರೋ ಎಂಟರಾಲಜಿಸ್ಟ್ ತಜ್ಞರಾದ ಡಾ.ಅನೂಪ್ ಆಳ್ವಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Home add -Advt

ಈ ನಡುವೆ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನಲೆಯಲ್ಲಿ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಏನೂ ಆಗಿಲ್ಲ, ಆರೋಗ್ಯದಿಂದ ಇದ್ದೇನೆ. ಸ್ವಲ್ಪ ಗ್ಯಾಸ್ಟ್ರಿಕ್ ಆಗಿತ್ತು ಅಷ್ಟೇ ಎಂದಿದ್ದಾರೆ.

ಸರಿಯಾದ ಸಮಯಕ್ಕೆ ಊಟ ತಿಂಡಿ ನೋಡಿಕೊಳ್ಳದ ಕಾರಣ ಸ್ವಲ್ಪ ಗ್ಯಾಸ್ಟ್ರಿಕ್ ಆಗಿತ್ತು. ನಮ್ಮ ಅಜೇಯ್ ಹೆಗಡೆ ಡಾಕ್ಟರ್ ಇದ್ದಾರೆ ಅವರು ನೋಡಿಕೊಂಡಿದ್ದಾರೆ. ಈಗ ನಾನು ಆರಾಮಾಗಿ ಇದ್ದೀನಿ ಎಂದು ತಿಳಿಸಿದರು.

Related Articles

Back to top button