Film & EntertainmentKarnataka NewsLatest

*ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಿಸಲಾಗಿದೆ.

ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂದನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಎಲ್ಲಾ 17 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಲಾಯಿತು.

ಈ ವೇಳೆ ನ್ಯಾಯಾಧಿಶರು ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಸೆ.9ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಗೆ ಸದ್ಯ ಜೈಲುವಾಸವೇ ಗತಿಯಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button