ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲಿನ 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಕೊಲೆ ಆರೋಪಿ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ. ಅಲ್ಲದೇ ಈಗಾಗಲೇ 7 ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಸಸ್ಪೆಂಡ್ ಮಾಡಲಾಗಿದೆ ಎಂದರು.
ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ಅಂತಹ ವ್ಯವಸ್ಥೆ ಒದಗಿಸುತ್ತಿರುವವರು ಯಾರು? ಹೇಗೆ ಅಂತಹ ವಸ್ತುಗಳು ಆತನಿಗೆ ಲಭ್ಯವಾಗುತ್ತಿದೆ? ಇದು ಜೈಲಿನ ಅಧಿಕಾರಗಳ್ ನಿರ್ಲಕ್ಷ್ಯದಿಂದ ಆಗಿರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ತನಿಖೆಗೂ ಸೂಚಿಸಲಾಗಿದೆ ಎಂದರು.
ಜೈಲರ್ ಶರಣಬಸವ ಅಮೀನಗಡ, ಸಹಾಯಕ ಜೈಲರ್ ಪುಟ್ಟಸ್ವಾಮಿ, ಹೆಡ್ ವಾರ್ಡರ್ ವೆಂಕಪ್ಪ, ಸಂಪತ್ ಸೇರಿದಂತೆ 7 ಜೈಲು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಜೈಲಿನ ಹಿರಿಯ ಅಧಿಕಾರಿ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದರು. ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ