*ಜೈಲಿನಲ್ಲಿ ದರ್ಶನ ಗೆ ರಾಜಾತಿಥ್ಯ; ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿ ಗೆಸೂಚಿಸಿದ ಗೃಹ ಸಚಿವ*
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ.
ಕೊಲೆ ಕೇಸ್ ಆರೋಪಿಯಾಗಿರುವ ನಟ ದರ್ಶ, ಜೈಲಿನಲ್ಲಿ ಆರಾಮವಾಗಿ ಕಲಕಳೆಯುತ್ತಿದ್ದು, ವಿಶೇಷ ಬ್ಯಾರಕ್ ನಿಂದ ಹೊರ ಬಂದು ಜೈಲಿನ ಗಾರ್ಡನ್ ಏರಿಯಾದಲ್ಲಿ ರೌಡಿ ವಿಲ್ಸನ್ ಗಾರ್ಡನ್ ನಾಗ ಹಾಗೂ ಮತ್ತಿತರರ ಜೊತೆ ಚೇರ್ ಮೇಲೆ ಕುಳಿತು ಒಂದು ಕೈಯಲ್ಲಿ ಕಾಫ್ ಮಗ್, ಇನ್ನೊಂದು ಕೈಯಲ್ಲಿ ಸಿಗರೇಟ್ ಹಿಡಿದು ನಸು ನಗುತ್ತಾ ಕುಳಿತಿರುವ ಫೋಟೋ ವೈರಲ್ ಆಗಿದೆ. ಅಲ್ಲದೇ ನಟ ದರ್ಶನ್ ಗೆ ಜೈಲಿನಿಂದ ವಿಡಿಯೋ ಕಾಲ್ ಮಾಡಲು ವ್ಯವಸ್ಥೆಗಳು ನಡೆದಿವೆ ಎನ್ನಲಾಗಿದೆ. ಕೊಲೆ ಆರೋಪಿ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದ್ದು, ಈ ಬೆಳವಣಿಗೆ ರಾಜ್ಯ ಗೃಹ ಇಲಾಖೆಗೆ ಮುಜುಗರವನ್ನುಂಟುಮಾಡಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅಧಿಕಾರಿಗಳ ವಿರುದ್ಧ ಗರಂ ಆಗಿದ್ದು, ಜೈಲಿನಲ್ಲಿ ಆರೋಪಿಗೆ ಇಂತಹ ವ್ಯವಸ್ಥೆ ಹೇಗೆ ಸಿಗುತ್ತಿದೆ ಎಂಬುದನ್ನು ಪ್ರಶ್ನಿಸಿದ್ದಾರೆ.
ಬಂದಿಖಾನೆ ಡಿಜಿ ಮಾಲಿನಿ ಕೃಷ್ಣಮೂರ್ತಿ ಜೊತೆ ಚರ್ಚಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಹಾಗೂ ಎಡಿಜಿಪಿ ಹಿತೇಶ್ ಗೃಹ ಸಚಿವರನ್ನು ಭೇಟಿಯಾಗಿ ಚರ್ಚಿಸಿದ್ದು ವಿವರಣೆ ನೀಡಿದ್ದಾರೆ.
ಬಂದಿಖಾನೆ ಅಧಿಕಾರಿ ಮಾಲಿನಿ ಕೃಷ್ಣಮೂರ್ತಿಗೆ ತಕ್ಷಣ ಆಂತರಿಕ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ