
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲುಪಾಲಾಗಿದ್ದಾರೆ. ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ನಟ ದರ್ಶನ್ ಸೇರಿದಂತೆ ನಾಲ್ವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಇಂದು ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ನಟ ದರ್ಶನ್, ವಿನಯ್, ಪ್ರದೋಶ್, ಧನರಾಜ್ ಸೇರಿ ನಾಲ್ವರು ಜುಲೈ 4ರವರೆಗೆ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. 2011ರ ಬಳಿಕ ಅಂದರೆ 13 ವರ್ಷಗಳ ಬಳಿಕ ನಟ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ