Film & Entertainment

*ಮೌನ ಮುರಿದ ನಟ ದರ್ಶನ್: ಅಭಿಮಾನಿಗಳಿಗೆ ಸಂಕ್ರಾಂತಿ ಸಂದೇಶ*

ಪ್ರಗತಿವಾಹಿನಿ ಸುದ್ದಿ: ಬರೋಬ್ಬರಿ ಏಳು ತಿಂಗಳ ಬಳಿಕ ನಟ ದರ್ಶನ್ ಮೌನ ಮುರಿದಿದ್ದು, ನಾಡಿನ ಜನತೆಗೆ ಮಕರ ಸಂಕ್ರಮಣದ ಶುಭಾಶಯಗಳನ್ನು ಕೋರಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿ ಜಾಮೀನು ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್, ಸಂಕ್ರಾಂತಿ ಹಬ್ಬವನ್ನು ಕುಟುಂಬದ ಜೊತೆ ಆಚರಿಸುತ್ತಿದ್ದಾರೆ. ಫಾರ್ಮ್ ಹೌಸ್ ನಲ್ಲಿ ಪತ್ನಿ ಹಾಗೂ ಮಗನ ಜೊತೆ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ ಎಂದು ತಿಳಿದುಬಂದಿದೆ. ಕುದುರೆ ಜೊತೆಗಿನ ಫೋಟೋವೊಂದನ್ನು ದರ್ಶನ್ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಂಕ್ರಾಂತಿ ಶುಭಾಶಯ ತಿಳಿಸಿದ್ದಾರೆ.

ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ. ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button