Film & Entertainment

*ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಜೈಲುವಾಸವೇ ಗತಿ*

ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Home add -Advt

ಪ್ರಗತಿವಾಹಿನಿ ಸುದ್ದಿ; ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗಿತ್ತು, ಈ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಆಯಾ ಜೈಲುಗಳಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಸೆ.30ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.


Related Articles

Back to top button