
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದ್ದು, ತಕ್ಷಣ ಆರೋಪಿಗಳನ್ನು ವಶಕ್ಕೆ ಪಡೆಯಲು ಸೂಚಿಸಿದೆ.
ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್ ಹಾಗೂ ಗ್ಯಾಂಗ್ ನ್ನು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಪ್ರತಿಗಾಗಿ ಕಾಯುತ್ತಿರುವ ಪೊಲೀಸರು, ಆದೇಶದಲ್ಲಿನ ಅಂಶಗಳನ್ನು ಪರಿಶೀಲಿಸಿ ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದ್ದಾರೆ.
ನಟ ದರ್ಶನ್ ತಮಿಳುನಾಡಿನಲ್ಲಿದ್ದಾರೆ. ಸಂಜೆ ವೇಳೆಗೆ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮತ್ತೊಂದೆಡೆ ದರ್ಶನ್ ಸುಂಟಿಕೊಪ್ಪದಿಂದ ಮೈಸೂರಿನತ್ತ ಪ್ರಯಾಣ ಬೆಳೆಸಿದ್ದಾರೆ ಎಂದೂ ಹೇಳಲಾಗುತ್ತಿದೆ. ಇನ್ನೊಂದೆಡೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಆರ್.ಆರ್.ನಗರದ ತಮ್ಮ ನಿವಾಸದಲ್ಲಿದ್ದು, ಹೊರಗಡೆ ಹೋಗದಂತೆ ಪೊಲೀಸರು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.