Belagavi NewsBelgaum NewsCrimeKannada NewsKarnataka NewsLatestNationalPolitics

*ಗಂಡ-ಹೆಂಡತಿ ನಡುವೆ ರಾಜಿ ಪಂಚಾಯತಿ: ಗಂಡಿನ ಕಡೆಯವರಿಗೆ ಥಳಿತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಂಡ-ಹೆಂಡತಿಯ ಜಗಳಕ್ಕೆ ರಾಜೀ ಪಂಚಾಯತಿ ಮಾಡಲು ಬಂದವರ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದು, ವಿಡಿಯೋ ವೈರಲ್ ಆಗಿದೆ.

ಬೆಳಗಾವಿ  ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಗಂಡ-ಹೆಂಡತಿ ನಡುವಿನ ವಿವಾದವನ್ನು ಬಗೆಹರಿಸಲು ರಾಜೀ ಪಂಚಾಯತಿ ನಡೆಸಲು ಗಂಡಿನ ಕಡೆಯವರು ಮುತ್ಯಾನಟ್ಟಿ ಗ್ರಾಮದಿಂದ ಬೆನಕನಹಳ್ಳಿಗೆ ಆಗಮಿಸಿದ್ದರು. ಈ ವೇಳೆ ಪಂಚಾಯತಿಗೆ ಬಂದವರೊಂದಿಗೆ ಗ್ರಾಮಸ್ಥರು ಗಲಾಟೆ ನಡೆಸಿ ಹೊಡೆದು ಓಡಿಸಿದ್ದಾರೆ ಎನ್ನಲಾಗಿದೆ.

Home add -Advt

ಹೆಂಡತಿಯೊಂದಿಗೆ ಗಲಾಟೆ ಮಾಡುತ್ತಿದ್ದ ಗಂಡನ ವಿಚಾರವಾಗಿ ಮಾತಿನ ಚಕಮಕಿ ಆರಂಭವಾಗಿ, ಮಾರಾಮಾರಿಯಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಘಟನೆಯ ವೇಳೆ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಡಿಸಿಪಿ ನಾರಾಯಣ ಬರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Related Articles

Back to top button