Kannada NewsKarnataka NewsLatestNational
*ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿವಾದ: ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.
ನಾಡ ಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರ ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಚಾಮುಂಡೇಶ್ವರಿ ಪೂಜೆ ಮಾಡಲು ಹಿಂದೂಯೇತರ ವ್ಯಕ್ತಿಗೆ ಆಹ್ವಾನ ನೀಡಲಾಗಿದೆ ಎಂದು ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಸುರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ವಿಚಾರಣೆಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ವಕೀಲರು ಸಿಜೆಐ ಪೀಠಕ್ಕೆ ಮನವಿ ಮಾಡಿದ್ದಾರೆ. ತುರ್ತು ವಿಚಾರಣೆಗೆ ಸಿಜೆಐ ಬಿ.ಆರ್.ಗವಾಯಿ ಒಪ್ಪಿಗೆ ಸೂಚಿಸಿದ್ದಾರೆ.