Kannada NewsLatestNational
*BREAKING: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನಾಡ ಹಬ್ಬ ದಸರಾ ಉದ್ಘಾಟನೆ ಹಾಗೂ ಚಾಮುಂಡಿ ದೇವಿ ಪೂಜೆಗೆ ಹಿಂದೂಯೇತರ ವ್ಯಕ್ತಿಯನ್ನು ಆಯ್ಕೆ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಬೆಂಗಳೂರು ನಿವಾಸಿ ಹೆಚ್.ಎಸ್. ಗೌರವ್ ಎಂಬುವವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ತುರ್ತು ವಿಚಾರಣೆಗೂ ಮನವಿ ಮಾಡಿದ್ದರು.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವರ್ಜಿ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವ ಸರ್ಕಾರದ ಕ್ರಮದಲ್ಲಿ ತಪ್ಪಿಲ್ಲ ಎಂದು ತಿಳಿಸಿದೆ.