Latest

ಈ ಬಾರಿಯ ದಸರಾಕ್ಕೆ ಸಿಎಂ ವಿಶೇಷ ಸಂದೇಶ

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಬರದ ಸಿದ್ಧತೆ ನಡೆದಿದ್ದು, ಆಹ್ವಾನ ಪತ್ರಿಕೆ ಕೂಡ ಸಿದ್ಧವಾಗಿದೆ. ಆಹ್ವಾನ ಪತ್ರಿಕೆಯಲ್ಲಿ ರಾಜ್ಯದ ಜನತೆಗೆ ಸಿಎಂ ಮಹತ್ವದ ಸಂದೇಶ ರವಾನಿಸಿದ್ದಾರೆ.

ಕೊರೊನಾ ಹಿನ್ನಲೆಯಲ್ಲಿ ಸರಳವಾಗಿ ದಸರಾ ಆಚರಿಸೋಣ. ಜೀವನದೊಂದಿಗೆ ಜೀವವೂ ಮುಖ್ಯವೆಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರದ ಈ ನಿರ್ಧಾರವನ್ನು ತಾವೆಲ್ಲರೂ ಸ್ವಾಗತಿಸುತ್ತೀರಿ ಎಂದು ಸದಾಶಯವಿದೆ. ಮುಂದಿನ ಬಾರಿ ವಿಜೃಂಭಣೆಯಿಂದ ದಸರಾ ಆಚರಿಸೋಣ ಎಂದು ಸಿಎಂ ತಿಳಿಸಿದ್ದಾರೆ.

Home add -Advt

ಮೈಸೂರು ದಸರಾ ಅಕ್ಟೋಬರ್ 7ರಂದು ಉದ್ಘಾಟನೆಯಾಗಲಿದೆ. ಚಾಮುಂಡಿಬೆಟ್ಟದಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ದಸರಾ ಉದ್ಘಾಟನೆ ಮಾಡಲಿದ್ದಾರೆ. ಅಕ್ಟೋಬರ್ 15 ರಂದು ಜಂಬೂಸವಾರಿ ನಡೆಯಲಿದ್ದು, ಸಂಜೆ 4:36ರಿದ 5:30ರ ಶುಭ ಮೀನ ಲಗ್ನದಲ್ಲಿ ಪೂಜೆ ನಡೆಯಲಿದೆ.
ದೊಡ್ಡ ಸಂಚಲನಕ್ಕೆ ಕಾರಣವಾದ ಕಿತ್ತೂರು ಶಾಸಕರಿಗೆ ಪ್ರಭಾಕರ ಕೋರೆ ನೀಡಿದ ಸಲಹೆ

Related Articles

Back to top button