ಬೆಳಗಾವಿ, ಚಿಕ್ಕೋಡಿ ಸೇರಿ ಉತ್ತರ ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆ ದಿನಾಂಕ ಪ್ರಕಟ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವಿವಿಧೆಡೆ ಲೋಕಸಭಾ ಚುನಾವಣೆ ಪ್ರಚಾರ ಕೈಗೊಳ್ಳಲಿದ್ದು, ಅವರು ಪ್ರವಾಸ ಪಟ್ಟಿ ಬಿಡುಗಡೆಯಾಗಿದೆ.
ಏಪ್ರಿಲ್ 24ರಂದು ಕಲಬುರಗಿಗೆ ಆಗಮಿಸಲಿರುವ ಸಿದ್ದರಾಮಯ್ಯ, ಕಲಬುರಗಿ ಹಾಗೂ ಬೀದರ್ ಜಿಲ್ಲೆಯ ಅಫ್ಜಲ್ ಪುರ, ಆಳಂದ, ಬೀದರ್ ನಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸುವರು.
ಏಪ್ರಿಲ್ 25ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಸಿದ್ದರಾಮಯ್ಯ, ನವಲಗುಂದ, ಗಜೇಂದ್ರಗಡ ಹಾಗೂ ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸುವರು. ಏ.25ರ ರಾತ್ರಿ ಮೈಸೂರಿಗೆ ತೆರಳಿ 26ರಂದು ಮತದಾನ ಮಾಡಿದ ನಂತರ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳುವರು. ಅದೇ ದಿನ ಸಂಜೆ ಕಲಬುರಗಿಯಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸುವರು.
ಏ.27ರಂದು ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ, ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಹಾಗೂ ವಿಜಯಪುರದಲ್ಲಿ ಪ್ರಚಾರ ನಡೆಸುವರು.
ಏ.28ರಂದು ಅಥಣಿಗೆ ಆಗಮಿಸಿ ಬೆಳಗ್ಗೆ 11.30ಕ್ಕೆ ಉಗಾರಖುರ್ದದಲ್ಲಿ, ಮಧ್ಯಾಹ್ನ 2.30ಕ್ಕೆ ಯರಗಟ್ಟಿಯಲ್ಲಿ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ಅಂದು ಸಂಜೆ 6 ಗಂಟೆಗೆ ಸಿಂದನೂರಿನಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. 29ರಂದು ಕೂಡ್ಲಗಿ, ಕುಷ್ಟಗಿ ಹಾಗೂ ಬಾಗಲಕೋಟೆಯಲ್ಲಿ ಪ್ರಚಾರ ನಡೆಸುವರು.
30ರಂದು 11 ಗಂಟೆಗೆ ಚಿಕ್ಕೋಡಿಯಲ್ಲಿ, 2.45ಕ್ಕೆ ಗೋಕಾಕಲ್ಲಿ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ. ಅಂದು ಸಂಜೆ 5.45ಕ್ಕೆ ಗಂಗಾವತಿಯಲ್ಲಿ ಪ್ರಚಾರ ಸಭೆ ನಡೆಸುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ