Kannada NewsKarnataka NewsLatestPolitics

*ಮೇಕೆದಾಟು ಯೋಜನೆ ಕಾಮಗಾರಿಯ ಶಿಲಾನ್ಯಾಸಕ್ಕೆ ದಿನಾಂಕ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮೇಕೆದಾಟು ಯೋಜನೆಗೆ 2027ರ ಆಗಸ್ಟ್ 15ರ ಒಳಗೆ ಶಿಲಾನ್ಯಾಸ ನೆರವೇರಲಾಗುವುದು  ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪರಿಷ್ಕೃತ ಸಮಗ್ರ ಯೋಜನಾ ವರದಿ ಸಲ್ಲಿಸಲಾಗಿದೆ. ಕೇಂದ್ರ ಮಟ್ಟದಲ್ಲಿ ಯೋಜನೆಯ ಅನುಮೋದನೆಗೆ ನಿರಂತರ ನಿಗಾ ವಹಿಸಲು ದೆಹಲಿಯಲ್ಲಿ ನೀರಾವರಿ ಇಲಾಖೆಯ ಇಬ್ಬರು ಉನ್ನತ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. 

Home add -Advt

ಯೋಜನೆಗೆ 12,500 ಎಕರೆ ಭೂಮಿಯ ಅಗತ್ಯವಿದ್ದು ಮುನ್ನೆಚ್ಚರಿಕೆಯಾಗಿ 20,000 ಎಕರೆಯನ್ನು ಗುರುತಿಸಲಾಗಿದೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯವಾಗಿ ಅಷ್ಟೇ ಪ್ರಮಾಣದ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿ ಕಾಮಗಾರಿ ಆರಂಭಿಸಲು ಸಿದ್ಧತೆ ನಡೆದಿದೆ. 

ಕಾವೇರಿ ನದಿ ನೀರಿನ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ ಎಂದು ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.

Related Articles

Back to top button