ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗಧಿ ಆಗಿದ್ದು ಜುಲೈ 15ರಿಂದ 26ರವರೆಗೆ ಅಧಿವೇಶನ ನಡೆಯಲಿದೆ.
ಈ ಬಾರಿ 10 ದಿನಗಳ ಕಾಲ ಮುಂಗಾರು ಅಧಿವೇಶನ ನಡೆಯಲಿದ್ದು ಹಲವು ವಿಚಾರಗಳು ಚರ್ಚೆಗೆ ಬರಲಿವೆ. ಈ ಕುರಿತು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ನೀಡಿದ್ದು , ಕರ್ನಾಟಕ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ಜುಲೈ 15 ರಿಂದ 26 ರವರೆಗೆ ಕರೆಯಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜೂನ್ 20 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಅಧಿಕಾರ ನೀಡಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅಧಿವೇಶನದ ದಿನಾಂಕವನ್ನ ಅಂತಿಮಗೊಳಿಸಿದ್ದು ಜುಲೈ 15ರಿಂದ ಅಧಿವೇಶನ ಆರಂಭವಾಗಿ ಜುಲೈ 26 ರಂದು ಕೊನೆಗೊಳ್ಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟೂ 9 ದಿನ ಕಲಾಪ ನಡೆಯಲಿದೆ. 17ರಂದು ಮೊಹರಮ್ ನಿಮಿತ್ತ ಸರಕಾರಿ ರಜೆ ಇರಲಿದೆ.
ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ, ಹಾಲಿನ ದರ ಏರಿಕೆ ಸೇರಿದಂತೆ ಹಲವಾರು ವಿಷಯಗಳು ಈ ಬಾರಿ ಕಲಾಪದಲ್ಲಿ ಕಾವೇರಿಸುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ