Kannada NewsKarnataka NewsPolitics

*ಮಹತ್ವದ ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿ*

ಪ್ರಗತಿವಾಹಿನಿ ಸುದ್ದಿ: ಜುಲೈ 2 ರಂದು ಮಧ್ಯಾಹ್ನ 12:00 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಡಿಕೆಶಿ ನೇತೃತ್ವದಲ್ಲಿ ಸರ್ಕಾರದ 15ನೇ ಸಚಿವ ಸಂಪುಟ ಸಭೆ ಜರುಗಲಿದೆ ಎಂದು ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಚಿವಾಲಯವು ಹೊರಡಿಸಿರುವ ಅಧಿಕೃತ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಿದ್ದು ಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.

ರಾಜ್ಯದ ಅಭಿವೃದ್ಧಿ ಹಾಗೂ ಹಲವು ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ ಈ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆಯಲಿದ್ದು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯ ಅಜೆಂಡಾದಲ್ಲಿ ಸೇರಿಸಬೇಕಾದ ಪ್ರಮುಖ ವಿಷಯಗಳು ಹಾಗೂ ಪ್ರಸ್ತಾವನೆಗಳನ್ನು ತಕ್ಷಣವೇ ಸಿದ್ಧಪಡಿಸಿ ಸಲ್ಲಿಸುವಂತೆ ರಾಜ್ಯ ಸರ್ಕಾರದ ಸಚಿವ ಸಂಪುಟ ಸಚಿವಾಲಯವು ಎಲ್ಲಾ ಸಂಬಂಧಪಟ್ಟ ಇಲಾಖೆಗಳಿಗೆ ತುರ್ತು ಸೂಚನೆ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button