ಪ್ರಗತಿವಾಹಿನಿ ಸುದ್ದಿ: ಶ್ರೀರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕಾಫಿ ನಾಡು ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಈಗಾಗಲೇ ದತ್ತಮಾಲಾ ಅಭಿಯಾನ ಆರಂಭವಾಗಿದ್ದು, ದತ್ತಮಾಲಾದಾರಿಗಳು 7 ದಿನಗಳ ಕಾಲ ಕಠಿಣ ವ್ರತದಲ್ಲಿದ್ದು ನವೆಂಬರ್ 10ರಂದು ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಭೇಟಿ ನಿಡಲಿದ್ದಾರೆ. ಅಂದು ದತ್ತಪೀಠದಲ್ಲಿ ಹೋಮ-ಹವನ, ವಿಶೇಷ ಪೂಜೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಾದ್ಯಂತ ಮುಂಜಾಗೃತಾ ಕ್ರಮವಾಗಿ ಕಟ್ಟೆಚ್ಚರ ಘೋಷಿಸಲಾಗಿದೆ.
ಚಿಕ್ಕಮಗಳೂರು ನಗರ, ದತ್ತಪೀಠ ಸುತಮುತ್ತ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನವೆಂಬರ್ 10ರಂದು ದತ್ತಪೀಠಕ್ಕೆ ಮಾಲಾಧಾರಿಗಳು ಆಗಮಿಸಲಿದ್ದಾರೆ. ದತ್ತಪೀಠದಲ್ಲಿ ವಿಶೇಶ ಪೂಜೆ ನಡೆಯುವ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಗಾಳಿಕೆರೆ ಸೇರಿದಂತೆ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಮೂರು ದಿನ ನಿರ್ಬಂಧ ವಿಧಿಸಲಾಗಿದೆ.
ನವೆಂಬರ್ 9ರ ಬೆಳಿಗ್ಗೆ 6ಗಂಟೆಯಿಂದ ನವೆಂಬರ್ 11ರ ಬೆಳಿಗ್ಗೆ 6 ಗಂಟೆಯವರೆಗೆ ಈ ಪ್ರದೇಶಗಳಿಗೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಪ್ರವೇಶ ಇರುವುದಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ