*ದತ್ತ ಜಯಂತಿ; ಬೃಹತ್ ಶೋಭಾಯಾತ್ರೆ; ಚಿಕ್ಕಮಗಳೂರಿನಲ್ಲಿ 4000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ*
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಇಂದು ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಬಾಬಾಬುಡನ್ ಗಿರಿ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತ ಜಯಂತಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ.
ಸಾವಿರಾರು ಸಂಖ್ಯೆಯಲ್ಲಿ ದತ್ತ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸುತ್ತಿದ್ದಾರೆ. ಮುಂಜಾಗೃತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಭದ್ರತೆಗಾಗಿ 4000 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ದತ್ತಪೀಠದ 200 ಮೀ ವ್ಯಾಪ್ತಿಯಲ್ಲಿ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜಿಲ್ಲೆಯ ಗಡಿ ಭಾಗ ಸೇರಿ 26 ಚೆಕ್ ಪೋಸ್ಟ್ ಗಳನ್ನು 49 ಸೆಕ್ಟರ್ ಆಫೀಸರ್ ಗಳನ್ನು ನೇಮಕ ಮಾಡಲಾಗಿದೆ.
ಮತ್ತೊಂದೆಡೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಚಿಕ್ಕಮಗಳೂರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ