Latest

*ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಗುಡ್ಡ ಕುಸಿತ: ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ; ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಕರಾವಳಿ, ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಅವಾಂತರಗಳು ಸೃಷ್ಟಿಯಾಗುತ್ತಿವೆ. ಗುಡ್ಡ ಕುಸಿತ, ಭೂಕುಸಿತ ಸಂಭವಿಸಿ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಹಲವೆಡೆ ಗುಡ್ಡ ಕುಸಿತ ಸಂಭವಿಸಿದೆ. ದತ್ತಪೀಠಕ್ಕೆ ತೆರಳುವ ಕವಿಕಲ್ ಗಂಡಿ ಬಳಿ ಗುಡ್ದ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.

ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಹಲವು ದಿನಗಳಿಂದ ಗುಡ್ಡ ಕುಸಿತವಾಗುತ್ತಿದೆ. ಇದೀಗ ದತ್ತಪೀಠಕ್ಕೆ ಸಂಪರ್ಕ ಕಲ್ಪಿಸುವ ಕವಿಕಲ್ ಗಂಡಿ ಬಳಿ ರಸ್ತೆ ಮೇಲೆಯೇ ಗುಡ್ಡ ಕುಸಿತವಾಗಿದ್ದು, ಮಣ್ಣು, ಮರಗಳು ರಸ್ತೆಯ ಮೇಲೆ ಬಿದ್ದಿವೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ದತ್ತಪೀಠಕ್ಕೆ ಪ್ರವಾಸಿಗರ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ.

Related Articles

Back to top button