ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿ ದತ್ತಪೀಠದ ಪೂಜಾ ವಿಧಿ-ವಿಧಾನಗಳಿಗೆ ನೇಮಕಗೊಂಡಿದ್ದ ಮುಜಾವರ್ ನೇಮಕ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
2018ರಲ್ಲಿ ಧಾರ್ಮಿಕ ದತ್ತಿ ಇಲಾಖೆ ದತ್ತಪೀಠದ ಪೂಜಾ ಕೈಂಕರ್ಯ ವಿಚಾರವಾಗಿ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಎಂಬುವವರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಶ್ರೀಗುರು ದತ್ತಾತ್ರೆಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.
ಇದೀಗ ಈ ಅರ್ಜಿ ಪುರಸ್ಕರಿಸಿದ ಹೈಕೋರ್ಟ್ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ನೇತೃತ್ವದ ಪೀಠ, ಮುಜಾವರ್ ನೇಮಕ ಆದೇಶ ರದ್ದುಗೊಳಿಸಿದ್ದು, ಅರ್ಚಕರ ನೇಮಕದ ಬಗ್ಗೆ ಸಮಿತಿ ರಚಿಸಿ, ಅಭಿಪ್ರಾಯ ಸಂಗ್ರಹಿಸಿ ತೀರ್ಮಾನಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸುನೀಲ್ ಕುಮಾರ್, ಹೈಕೋರ್ಟ್ ತೀರ್ಪು ಸ್ವಾಗತಾರ್ಹ. ಅರ್ಚಕರ ನೇಮಕದ ಬಗ್ಗೆ ರಾಜ್ಯ ಸರ್ಕಾರ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಿದೆ. ಇದು ಹಲವು ವರ್ಷಗಳ ಹಿಂದೂಗಳ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದರು.
ಕಾರ್ಮಿಕರ ವೇತನ ಪರಿಷ್ಕರಣೆಗೆ ಚರ್ಚೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ