ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ದತ್ತಪೀಠದ ಆವರಣದಲ್ಲಿ ಮತ್ತೆ ಮಾಂಸಾಹಾರ ಸೇವನೆ ಮಾಡಿರುವುದು ಪತ್ತೆಯಾಗಿದ್ದು, ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಚಿಕ್ಕಮಗಳೂರಿನ ದತ್ತಪೀಠದ ಆವರಣದಲ್ಲಿ ಹೋಮ-ಹವನಕ್ಕಾಗಿ ನಿರ್ಮಿಸಿರುವ ತಾತ್ಕಾಲಿಕ ಶೆಡ್ ನಲ್ಲಿ ಮಾಂಸಾಹಾರ ಊಟ ಮಾಡಲಾಗಿದೆ. ಈ ಹಿಂದೆ 6 ತಿಂಗಳ ಹಿಂದೆ ಇಂಥದ್ದೇ ಘಟನೆ ನಡೆದಿತ್ತು. ದತ್ತಪೀಠದ ಆವರಣದಲ್ಲಿ ಮಾಂಸಾಹಾರ ಸೇವನೆ ಮಾಡುತ್ತಿದ್ದ ವಿಡಿಯೋ ಕೂಡ ವೈರಲ್ ಆಗಿತ್ತು. ಈ ಬಗ್ಗೆ ಜಿಲ್ಲಾಡಳಿತಕ್ಕೂ ದೂರು ನೀಡಲಾಗಿತ್ತು. ಇದೀಗ ಮತ್ತೆ ಅಂಥದ್ದೇ ಘಟನೆ ಮರುಕಳಿಸಿದ್ದು, ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಖಂಡನೀಯ ಎಂದು ಹಿಂದೂ ಸಂಘಟನೆಗಳು ಕಿಡಿಕಾರಿವೆ.
ಜಿಲ್ಲೆಯ ಭಾವಕ್ಯತೆ ಕೇಂದ್ರದಲ್ಲಿ ಮತ್ತೆ ಮತ್ತೆ ಹಿಂದೂಗಳ ಭಾವನೆಗೆ ಧಕ್ಕೆಯುಂಟುಮಾಡಲಾಗುತ್ತಿರುವುದು ಸರಿಯಲ್ಲ. ಇದು ಜಿಲ್ಲಾಡಳಿತದ ನಿರ್ಲಕ್ಷದಿಂದ ನಡೆದ ಘಟನೆಯಾಗಿದೆ. ಇನ್ಮುಂದೆ ನಾವೇ ಕ್ರಮ ಕೈಗೊಳ್ಳುತ್ತೇವೆ ಎಂದು ಹಿಂದೂ ಬ್ರಿಗೇಡ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ
https://pragati.taskdun.com/politics/sc-st-reservationincreasecabinet-meeting/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ