ಕೊರೊನಾ ವೈರಸ್ ಗೆ ವ್ಯಾಕ್ಸಿನ್ ಕಂಡುಹಿಡಿಯುವ ಟೀಂ ನಲ್ಲಿದ್ದಾರೆ ನಮ್ಮ ಕನ್ನಡಿಗ

ಪ್ರಗತಿವಾಹಿನಿ ಸುದ್ದಿ; ಹಾಸನ: ವಿಶ್ವಾದ್ಯಂತ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್‍ಗೆ ಔಷಧ ಕಂಡುಹಿಡಿಯುವ ತಂಡದಲ್ಲಿ ಕರ್ನಾಟಕದ ಹಾಸನ ಮೂಲದ ವ್ಯಕ್ತಿ ಸ್ಥಾನ ಪಡೆದಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ.

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮಹದೇಶ ಪ್ರಸಾದ್ ಎಂಬುವವರು ಯುರೋಪಿಯನ್ ಟಾಸ್ಕ್ ಫೋರ್ಸ್ ಫಾರ್ ಕೊರೊನಾ ವೈರಸ್ ವ್ಯಾಕ್ಸಿನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮಹದೇಶ್ ಜರ್ಮನಿಯಲ್ಲಿ ವಿಜ್ಞಾನಿಯಾಗಿದ್ದರು. ವಿದೇಶದಲ್ಲಿರುವ ವಿಜ್ಞಾನಿಗಳು ಭಾರತಕ್ಕೆ ಹಿಂದಿರುಗಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದ ಮೆರೆಗೆ ಮಹದೇಶ್ ಭಾರತಕ್ಕೆ ಮರಳಿದ್ದರು. ಆದರೆ ಇದೀಗ ಕೊರೊನಾ ವೈರಸ್ ಗೆ ವ್ಯಾಕ್ಸಿನ್ ಕಂಡು ಹಿಡಿಯಲು ಸಂಶೋಧಾನಾ ತಂಡದಲ್ಲಿ ಕಾಅರ್ಯ ನಿರ್ವಹಿಸಲು ಬೆಲ್ಜಿಯಂಗೆ ತೆರಳಿದ್ದಾರೆ.

Home add -Advt

ಯುರೋಪ್ ರಾಷ್ಟ್ರಗಳು ಒಗ್ಗೂಡಿ ಕೊರೊನಾ ವ್ಯಾಕ್ಸಿನ್ ಕಂಡು ಹಿಡಿಯಲು ಹತ್ತು ತಂಡ ರಚಿಸಿದ್ದು, ವಿಶ್ವ ಸಂಸ್ಥೆ ಕೊರೊನಾ ಔಷಧಿಗಾಗಿ ಹತ್ತು ತಂಡ ರಚಿಸಿತ್ತು. ಈ ತಂಡದಲ್ಲಿ ನಮ್ಮ ಕನ್ನಡಿಗ ಮಹದೇಶ ಪ್ರಸಾದ್ ಸ್ಥಾನ ಪಡೆದುಕೊಂಡಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಅವಧಿಯಲ್ಲಿ ಬಯೋಕೆಮಿಸ್ಟ್ರಿ ಪಿಹೆಚ್‍ಡಿ ಸ್ನಾತಕ ಪದವಿಗಳಿಸಿದ ಮೊಟ್ಟ ಮೊದಲ ಕಿರಿಯ ಎಂಬ ಹೆಗ್ಗಳಿಕೆ ಡಾ. ಮಹದೇಶ್ ಪ್ರಸಾದ್ ಅವರಿಗಿದೆ. ಕಿರಿಯ ವಯಸ್ಸಿನಲ್ಲಿಯೇ ಸಾಧನೆಗಾಗಿ ಸತತ 5 ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪುರಸ್ಕಾರಗಳನ್ನು ಮತ್ತು ಗೌರವಗಳನ್ನು ಪಡೆದ ಮೊದಲ ಕಿರಿಯ ವಿಜ್ಞಾನಿ ಎಂಬ ಹೆಗ್ಗಳಿಕೆಗೆ ಮಹದೇಶ್ ಪಾತ್ರರಾಗಿದ್ದಾರೆ.

Related Articles

Back to top button